ಬೆಂಗಳೂರು : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜುಲೈ 23 ರಂದು ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಇಳಿದಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಕಳೆದ ಹಲವು ದಿನಗಳಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರೀ ಅಪಘಾತಗಳು ಸಂಭವಿಸುತ್ತಿದ್ದು ಆದ್ರೆ ಇದೀಗ ಸಭೆ ಬಳಿಕ ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳಿಂದಾಗಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಕುಸಿತವಾಗಿದೆ. ಅಲ್ಲದೆ ಮೇ – 29 ಸಾವುಗಳು, ಜೂನ್ – 28 ಸಾವುಗಳು ಸಂಭವಿಸಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿತ್ತು ಎಂದು ವರದಿ ಮಾಡಿದ ನಮ್ಮ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದಕ್ಕೆ ಅಭಿನಂದನೆಗಳು ಎಂದಿದ್ದಾರೆ ಮುಂದಿನ ದಿನಗಳಲ್ಲಿ ಸಾವುಗಳನ್ನು ಒಂದೇ ಅಂಕಿಯಲ್ಲಿ ಇಡುವ ಅಗತ್ಯವಿದೆ ಎಂದಿದ್ದಾರೆ.