ತುಮಕೂರು : ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಸಮೀಪವಿರುವ ಜಯಮಂಗಲಿ ಬ್ರಿಡ್ಜ್ ಬಳಿ ಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಓರ್ವ ಮಹಿಳೆ ಸಾವು, 9 ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಜೋಗೇನೇಹಳ್ಳಿ ಗ್ರಾಮದ ಲಕ್ಷ್ಮೀದೇವಿ (33)ಮೃತಪಟ್ಟಿದ್ದಾರೆ. ಉಳಿದ 9 ಮಹಿಳೆಯರಿಗೆ ಗಂಭೀರ ಗಾಯಗೊಂಡ ಜನರು ಮಧುಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೌರಿಬಿದನೂರು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಕೆಲಸಕ್ಕಾಗಿ ಮಹಿಳೆಯರನ್ನು ಕರೆದೊಯ್ಯುತ್ತಿದ್ದ ಆಟೋಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಇದರ ಪರಿಣಾಮ ಓರ್ವ ಮಹಿಳೆ ಸಾವು, 9 ಪ್ರಯಾಣಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.