ಕಲಬುರ್ಗಿ: ಇಂದು ಕಲ್ಬುರ್ಗಿಯಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ ಈ ಬೆನ್ನಲ್ಲೆ ಕಾರ್ಯಕ್ರಮವನ್ನು ಉದ್ದೇಶಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನಮ್ಮದು ಬೋಗಸ್ ಭರವಸೆಗಳಲ್ಲ, ಕೊಟ್ಟ ಮಾತುಗಳನ್ನು ಇಡೇರಿಕೆ ಮಾಡಿದ್ದೇವೆ ಎಂದಿದ್ದಾರೆ.
ಗೃಹಜ್ಯೋತಿ ಯೋಜನೆ ಚಾಲನೆ ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಗೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ, ನಮ್ಮದು ಬೋಗಸ್ ಭರವಸೆಗಳಲ್ಲ ಎಂದು ಬಿಜೆಪಿ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಸರ್ಕಾರ ಬಡವರಿಗೆ ಯಾವುದೇ ಯೋಜನೆ ಜಾರಿ ಮಾಡಲಿಲ್ಲ. ಯೋಜನೆಗಳ ಕುರಿತಾಗಿ ನಾವು ಪಾರ್ಲಿಮೆಂಟ್ನಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಪ್ರಧಾನಿ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಇದೀಗ ಎಲ್ಲ ಕಡೆ ಮೋದಿ ಕರ್ನಾಟಕದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು