ಮೈಸೂರು : ಇಂದು ಮೈಸೂರಿಗೆ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣ(Mysore Mandakalli Airport)ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು(President Draupadi Murmu) ಆಗಮಿಸಲಿದ್ದಾರೆ. ಮೈಸೂರು ಆಗಮನದ ವೇಳೆ ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿಗೆ ಸ್ವಾಗತಿಸಲಿದ್ದಾರೆ.
ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದು, ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿಗ ದಂಪತಿ ಬೊಮ್ಮ, ಬೆಳ್ಳಿ ಜೊತೆ ಕಾವಾಡಿಗರು, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ ಇಂದು ಸಂಜೆ ದೆಹಲಿಗೆ ತೆರಳುವ ಸಾಧ್ಯತೆಯಿದೆ.