ಬೆಂಗಳೂರು : ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿಯ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ನಡೆಸಿದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ಮಾಧ್ಯಮದೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕರಣಕ್ಕೆ ಸಂಬಂಧಿಸಿದಂತೆ ಈಗ ತಾನೇ ಇದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಧಿಕಾರಿ ಒಬ್ಬಂಟಿಯಾಗಿ ಮನೆಯಲ್ಲಿ ವಾಸ ಮಾಡುತ್ತಿದ್ದರು. ಅವರ ಪತಿ ಊರಿನಲ್ಲಿ ಇದ್ದರು. ಸದ್ಯಕ್ಕೆ ಇದು ಆರಂಭಿಕ ಮಾಹಿತಿ. ಕೊಲೆಯ ಬಗ್ಗೆ ಸಂಪೂರ್ಣವಾದ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೊಲೆ ಪ್ರಕರಣ :
ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ಚಾಕುವಿನಿಂದ ಇರಿದು ಗಣಿ ಭೂ ವಿಜ್ಞಾನ ಇಲಾಖೆಯ (Department of Mines and Geology) ಉಪ ನಿರ್ದೇಶಕಿಯನ್ನು ಬರ್ಬರ ಹತೈಗೈದ ಘಟನೆ ಬೆಳಕಿಗೆ ಬಂದಿದೆ ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ಗೋಕುಲ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ರಾತ್ರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ಪ್ರತಿಮಾ ಅವರ ಸಹೋದರ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಬಳಿ ವಿಚಾರಿಸಿ ಫ್ಲ್ಯಾಟ್ ಹತ್ತಿರ ತೆರಳಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ಪ್ರತಿಮಾ ಅವರನ್ನು ಕಾರು ಚಾಲಕ ಫ್ಲ್ಯಾಟ್‌ಗೆ ಬಂದು ಬಿಟ್ಟಿದ್ದಾನೆ. ಪ್ರತಿಮಾ ಬೆಂಗಳೂರಿನಲ್ಲಿ ಒಬ್ಬರೇ ವಾಸವಾಗಿದ್ದು, ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದಾರೆ. ಪ್ರತಿಮಾ ಅವರ ಜೊತೆ ಅಪಾರ್ಟ್‌ಮೆಂಟ್‌ನಲ್ಲಿ ನಿನ್ನೆ ಯಾರಿದ್ದರು ಹತ್ಯೆ ಯಾಕಾಯ್ತು ಅನ್ನೋದರ ಮಾಹಿತಿ ತಿಳಿಯಬೇಕಿದೆ.