ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ಹೊಂದಿದ್ದು, ವಾಡಿಕೆ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಲಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬೀಳುವ ಹಿನ್ನೆಲೆ ಕೆಆರ್ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ರಾಜ್ಯದ ರಾಮನಗರ, ವಿಜಯಪುರ, ಕೊಡಗು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಈ ಬಾರಿ ಹೆಚ್ಚು ಮಳೆಯಾಗಿದೆ. ರಾಜಧಾನಿಯಲ್ಲಿಯೂ ವಾಡಿಕೆಯ ಮಳೆಯಾಗಿದೆ.