ಬೆಂಗಳೂರು: ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್ ದರ 6,87,49,57,753 ರೂ. ಆಗಿದ್ದು, ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ.
ಶಕ್ತಿ ಯೋಜನೆ ಪ್ರಾರಂಭವಾಗಿ ಸುಮಾರು ಎರಡು ತಿಂಗಳ ನಂತರ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಮೊದಲ ಕಂತಿನ ಹಣವಾಗಿ ಒಟ್ಟು 125.48 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಕೆಎಸ್‌ಆರ್‌ಟಿಸಿಗೆ 47.15 ಕೋಟಿ ರೂಪಾಯಿ, ಬಿಎಂಟಿಸಿ 21.85 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 32.57 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾಲ್ಕು ನಿಗಮಗಳಿಗೂ ಪ್ರತೇಕವಾಗಿ ಹಣ ಬಿಡುಗಡೆ ಮಾಡಲಾಗಿದೆ.
ಯಾವ ನಿಗಮಗಳಿಗೆ ಎಷ್ಟು ಹಣ ಬಿಡುಗಡೆ
KSRTC – 47.15. ಕೋಟಿ
BMTC – 21.85. ಕೋಟಿ
NWRTC- 32.57. ಕೋಟಿ
KKRTC – 23.90. ಕೋಟಿ