ಬೆಂಗಳೂರು : ಕಾಲು ಜಾರಿ ಬಿದ್ದು, ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (Saalumarada Thimmakka) ಅಸ್ವಸ್ಥಗೊಂಡಿದ್ದು, ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸಾವಿರಾರು ಮರಗಳಿಗೆ ಜೀವ ನೀಡಿರುವ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಸದ್ಯ ಏರುಪೇರಾಗಿದ್ದು, ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಕಾರು ಜಾರಿ ಬಿದ್ದು, ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು, ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಉಸಿರಾಟದ ತೊಂದರೆ, ಬೆನ್ನು ಮೊಳೆ ಅನಾರೋಗ್ಯಕ್ಕೆ ಒಳಗಾಗಿದ್ದರು.