ಉಡುಪಿ : ಉಡುಪಿ ವಿದ್ಯಾರ್ಥಿನಿ ವಿಡಿಯೋ ಪ್ರಕರಣ(Udupi student video case) ನಾಗರಿಕ ಸಮಾಜ ತಲೆತಗ್ಗಿಸುವಂತದ್ದು, ಈ ಪ್ರಕರಣವನ್ನು ಎಸ್ಐಟಿಯಿಂದ ತನಿಖೆ ಮಾಡಿಸಿ ಎಂದು ರಾಜ್ಯಪಾಲರಿಗೆ ಮನವಿ ಕೊಟ್ಟು ಒತ್ತಾಯಿಸಿದ್ದೇವೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ(Former minister Kota Srinivas Pujari) ತಿಳಿಸಿದ್ದಾರೆ.
ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮದೊಂದಿಗೆ ಮಾತನಾಡಿ, ಉಡುಪಿ ವಿದ್ಯಾರ್ಥಿನಿ ವೀಡಿಯೋ ಪ್ರಕರಣ ಸಿಎಂ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅದಕ್ಕಾಗಿ ಗವರ್ನರ್ ಭೇಟಿಯಾಗಿ ಎಸ್ಐಟಿ ತನಿಖೆಗೆ ಸರ್ಕಾರಕ್ಕೆ ನಿರ್ದೇಶನ ಕೊಡುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಕೊಡಬೇಕು. ಇವಾಗ ಗವರ್ನರ್‌ಗೆ ಮನವಿ ಮಾಡಿದ್ದೇವೆ. ಅವರು ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೊಡೋದಾಗಿ ಭರವಸೆ ಕೊಟ್ಟಿದ್ದಾರೆ. ಒಂದು ವೇಳೆ ಗವರ್ನರ್ ಸೂಚನೆ ನೀಡಿದ್ರು, ಸರ್ಕಾರ ಮೊಂಡುತನ ಪ್ರದರ್ಶನ ಮುಂದುವರಿಸಿದ್ರೆ ಕೇಂದ್ರ ಸರ್ಕಾರಕ್ಕೆ ದೂರು ಕೊಡುವ ಬಗ್ಗೆಯೂ ಯೋಚನೆ ಮಾಡ್ತೀವಿ ಎಂದ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.