ತುಮಕೂರು : ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಬಳಿಯ ಕೃಷ್ಣಪ್ಪನ ಕೊಪ್ಪಲು ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಚನ್ನಪಟ್ಟಣ ಮೂಲದ ಅಮಾನುಲ್ಲಾ ಖಾನ್(60) ಮುನಾವರ್(50) ಮೃತ ದುರ್ದೈವಿಗಳು. ಹಿಂದಿನಿಂದ ಬಂದ ಅಪರಿಚಿತ ವಾಹನ ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.