ಬೆಂಗಳೂರು : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಮಾತನಾಡಿ, ಕರ್ನಾಟಕ ವಿವಿಧ ರಾಜ್ಯದಲ್ಲಿ ಹಂಚಿಹೋಗಿತ್ತು. ಅದಕ್ಕೆ ಕರ್ನಾಟಕ ಏಕೀಕರಣವಾಗಿದ್ದು ಇಂತಹ ಸಂದರ್ಭದಲ್ಲಿ ಹಿಂದಕ್ಕೆ ಹೋಗೋ ಅವಶ್ಯಕತೆ ಇರಲಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆ. ಈ ಸಂದರ್ಭದಲ್ಲಿ ಇದು ಅವಶ್ಯಕತೆ ಇರಲಿಲ್ಲ. ಬೆಳಗಾವಿ ಈಗ ಕರ್ನಾಟಕಕ್ಕೆ ಸೇರಿದೆ. ಹೇಳಿಕೆ ಮೂಲಕ ರಾಜಕೀಯ ಪ್ರೇರಿತ ಹುನ್ನಾರ ಆಗಬಾರದು. ಜನರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕು. ಕನ್ನಡಿಗರು ವಿವಿಧ ಸಂಸ್ಕೃತಿಯಲ್ಲಿ ಏಕತೆ ಕಾಣಬೇಕು. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ಖಂಡಿಸ್ತೇವೆ. ಇವರ ಹೇಳಿಕೆ ಮರಾಠಿಗರಾಗಲಿ, ಕನ್ನಡಿಗರಾಗಲಿ ಬೆಂಬಲಿಸಲ್ಲ ಎಂದು ಕಿಡಿಕಾರಿದ್ದಾರೆ.