ಬೆಂಗಳೂರು : AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಮೋದಿ ಉಪನಾಮ ಪ್ರಕರಣದಲ್ಲಿ ಇದೀಗ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ದೇಶದ ಪ್ರಜಾಪ್ರಭುತ್ವ ಉಳಿಸುವ, ನ್ಯಾಯ ಒದಗಿಸುವ ಪೀಠ ಸುಪ್ರೀಂ ಕೋರ್ಟ್. ದೇಶಕ್ಕೋಸ್ಕರ, ಜನತೆಗೋಸ್ಕರ ಮಾಡಿರುವ ದನಿಯನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಹೊರಬಂದಿದೆ. ಜನ ಈಗಾಗಲೇ ಅರಿತುಕೊಂಡಿದ್ದಾರೆ. ಎಲ್ಲರೂ ಭಾರತದತ್ತ ಎದುರು ನೋಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದು ಜನರಿಗೆ ತಿಳಿದಿದೆ’ ಎಂದು ಹೇಳಿದರು.