ಉಡುಪಿ : ಉಡುಪಿಯ ಕಾಲೇಜಿನ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ವಿರುದ್ದ ಟ್ವಿಟರ್ ಹಾಗೂ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಮಹಿಳೆಯನ್ನು ಬಂಧನ ಮಾಡಲಾಗಿದೆ.
ಮುಸ್ಲಿಂ ವಿದ್ಯಾರ್ಥಿನಿಯರು ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾಡಿದ್ದು ಕಾಂಗ್ರೆಸ್ಸಿನವರ ಪ್ರಕಾರ ಮಕ್ಕಳಾಟವಂತೆ ಎಂದು ಇದನ್ನೆ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳ್ತಿದ್ರಾ ಎಂದು ಅವಹೇಳನಕಾರಿ ಪೋಸ್ಟ್‌ನನ್ನು ಬಿಜೆಪಿ ಕಾರ್ಯಕರ್ತೆ ಶಕುಂತಲಾ ಶೇರ್ ಮಾಡಿ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ಸಂಬಂಧಿಸಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಶಕುಂತಾಳನ್ನ ಬಂಧಿಸಿದ್ದಾರೆ ಎಂದು ವರದಿಯಾಗಿದೆ.