ಚಿತ್ರದುರ್ಗ: ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಬಲಿಯಾದ ಘಟನೆ ಬೆಳಕಿಗೆ ಬಂದಿದೆ.
ಮಂಜುಳಾ(21) ಚಿಕಿತ್ಸೆ ಫಲಿಸದೆ ಸಾವನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಹಲವು ದಿನಗಳಿಂದ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ, ಇದು ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ. ನಗರಸಭೆಯಿಂದ ಸರಬರಾಜು ಮಾಡುವ ನೀರು ಕಲುಷಿತಗೊಂಡಿದ್ದು ನೀರಿನ ಟ್ಯಾಂಕ್ ತೊಳೆಯುತ್ತಿರಲಿಲ್ಲ, ಇದರಿಂದಲೇ ಜನರ ಜೀವಗಳು ಬಲಿಯಾಗುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ. ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.