ಬೆಂಗಳೂರು : ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಬೆನ್ನಲ್ಲೇ ನಟ ಯಶ್ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.
:38ನೇ ವರ್ಷ ನಟ ಯಶ್ ಹುಟ್ಟಹಬ್ಬದ ಹಿನ್ನೆಲೆ ಬರ್ತ್ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಜತೆಗೆ ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.
ಆಸ್ಪತ್ರೆಗೆ ಭೇಟಿ ನೀಡಿ ಯಶ್ ವಾಪಸ್ ತೆರಳುತ್ತಿದ್ದಾಗ ಮತ್ತೊಂದು ಅವಘಡ ಸಂಭವಿಸಿದ್ದು. ಯಶ್ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ. ಮೃತ ನಿಖಿಲ್ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು. ಗದಗ ಮುಳುಗುಂದ ರಸ್ತೆಯಲ್ಲಿ ನಿಖಿಲ್ ಯಶ್ ನೋಡೋದಕ್ಕಾಗಿ ಸ್ಕೂಟಿಯಲ್ಲಿ ಬಂದ ವೇಳೆ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾನೆ. ಇಂದು ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ. ಹುಟ್ಟಹಬ್ಬದ ದಿನವೇ ಅಭಿಮಾನಿಗಳ ಸಾವು ಯಶ್ ಕರಿನೆರಳು ಬೀರಿದಂತಾಗಿದೆ.