ಬೆಂಗಳೂರು : ನಗರದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ರೈಲು ಮುಂದೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಕೇರಳ ಮೂಲದ ಯುವಕ ಶಾರೋನ್ ಮೆಟ್ರೋ ರೈಲು ಮುಂದೆ ಹಾರಿ ಯುವಕ ಎಂದು ಗುರುತಿಸಲಾಗಿದೆ. ಕೇರಳ ಮೂಲದ 23 ವರ್ಷದ ಶಾರೋನ್ ರಾತ್ರಿ 7.12ರ ವೇಳೆಗೆ ಮೆಟ್ರೋ ರೈಲು ಬಂದಾಗ ಉದ್ದೇಶಪೂರ್ವಕವಾಗಿಯೇ ರೈಲು ಹಳಿಗೆ ಹಾರಿದ್ದಾನೆ ಎನ್ನಲಾಗಿದೆ. ತಕ್ಷಣ ಯುವಕನನ್ನು ಮೆಟ್ರೋ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಪ್ತಗಿರಿ ಆಸ್ಪತ್ರೆಯ ಐಸಿಯುವಿನಲ್ಲಿ ಯುವಕ ಶಾರೋನ್‍ಗೆ ಚಿಕಿತ್ಸೆ ನೀಡುತ್ತಿದ್ದಾರೆ. ರೈಲು ಡಿಕ್ಕಿಯಾದ ಹಿನ್ನೆಲೆಯಲ್ಲಿ ಯುವಕನ ಕಾಲು ಫ್ರ್ಯಾಕ್ಚರ್ ಆಗಿದ್ದು, ತಲೆಗೆ ಕರೆಂಟ್ ಶಾಕ್ ತಗುಲಿದೆ ಅಬ್ಬಿಗೆರೆ ಬಳಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡ್ತಿದ್ದ ಯುವಕನಿಗೆ ಕಂಪನಿಯವರೇ ವಾಸ್ತವ್ಯಕ್ಕೆ ರೂಂ ಸಹ ಮಾಡಿಕೊಟ್ಟಿದ್ರು. ಪೀಣ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.