ಬಾಗಲಕೋಟೆ : ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಜಮಖಂಡಿ-ಮುಧೋಳ ಹೆದ್ದಾರಿಯಲ್ಲಿ ಯುವಕನ ಕತ್ತು ಕೊಯ್ದು ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ.
ಜಮಖಂಡಿ ನಗರದ ಅನೀಸ್ ಬುಖಾರೆ(24) ಮೃತ ವ್ಯಕ್ತಿ. ಸ್ಥಳಕ್ಕೆ ಎಸ್ಪಿ ಅಮರನಾಥ ರೆಡ್ಡಿ, ಡಿವೈಎಸ್ಪಿ ಶಾಂತವೀರ, ಸಿಪಿಐ ಮಲ್ಲಪ್ಪ ಮಡ್ಡಿ ಜಮಖಂಡಿ ಗ್ರಾಮೀಣ ಠಾಣೆ ಪಿ.ಎಸ್.ಐ ಮಹೇಶ ಸಂಖ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಜಮಖಂಡಿ ನಗರದಲ್ಲಿ ಎಸ್ಪಿ ಅಮರನಾಥ ರೆಡ್ಡಿ ಮಾತನಾಡಿ, ಕೊಲೆ ಮಾಡಿದ ಆರೋಪಿಗಳನ್ನ ಶೀಘ್ರದಲ್ಲೇ ಬಂಧಿಸುತ್ತೇವೆ. ಆರೋಪಿಗಳ ಪತ್ತೆಗೆ ಎರಡು ತಂಡ ರಚಿಸಲಾಗಿದೆ. ಆರೋಪಿಗಳನ್ನ ಬಂಧಿಸಿ , ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಈ ಘಟನೆ ಸಂಬಂಧಿಸಿ ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.