ಬೆಂಗಳೂರು : ಜೊತೆಯಲ್ಲಿ ಕೆಲಸ ಮಾಡುವ ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವಪ್ಪಿದ್ದಾರೆ ಎಂದು ವರದಿಯಾಗಿದೆ.
ಸೋಹೆಲ್ ಖಾನ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಮಾಲೀಕ ಖಾಸೀಮ್ ಹಲ್ಲೆ ಮಾಡಿ ಮಾರಕಾಸ್ರ್ತಗಳಿಂದ ಹೊಡೆದು ಮೋರಿಯಲ್ಲಿ ಎಸೆದಿದ್ದನು. ಈ ವಿಚಾರ ತಿಳಿದು ಸ್ಥಳೀಯರು ಗಾಯಾಳನ್ನು ಸೋಹೆಲ್ ಬೌರಿಂಗ್ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತು.
ಇದೀಗ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವಪ್ಪಿದ್ದಾರೆ . ಈ ಘಟನೆ ಸಂಬಂಧಿಸಿ ಸೆಕ್ಷನ್ 307 ಅಡಿಯಲ್ಲಿ ಕೆ.ಜಿ .ಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಇದೀಗ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.