Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಮಲಪ್ರಭಾ ಜಲಾಶಯದಿಂದ ಕರ್ನಾಟಕದ  4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ

ಬೆಂಗಳೂರು : ಸೆ.22 ರಿಂದ ಮುಂದಿನ 15 ದಿನಗಳ ಕಾಲ ಮಲಪ್ರಭಾ ಜಲಾಶಯದಿಂದ ಕರ್ನಾಟಕದ  4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಸೆ.22 ರಿಂದ ಮುಂದಿನ 15 ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ. ಜುಲೈ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉತ್ತರ ಕರ್ನಾಟಕದ ಪ್ರಮುಖ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಭೀಮಾ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯಗಳಲ್ಲಿ ನೀರು ಸಂಗ್ರಹಣೆಯಾಗಿದೆ.

ಆದರೆ ಜುಲೈ ನಂತರ ಮಳೆಯಾಗದೆ ಬರಗಾಲ ಆವರಿಸಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥದಲ್ಲಿ ಮಲಪ್ರಭಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದೆ. ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ.

ಈ ಬಗ್ಗೆ ಇತ್ತೀಚಿಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!