ಮೈಸೂರು : ಮೈಸೂರಿನಲ್ಲಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವುದಾಗಿ ಹೇಳಿದ ಬೆನ್ನಲ್ಲೇ ವಿಪಕ್ಷ ಬಿಜೆಪಿ ಸಿಡಿದೆದ್ದಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯನವರ ಎಕ್ಸ್ ಖಾತೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಕ್ಸ್ ಖಾತೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ .ಶಾಲೆ – ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ.
ಮುಖ್ಯಮಂತ್ರಿಗಳು. ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದೆ ಎಂದು ಆರೋಪಿಸಿದೆ.
ಹಿಜಾಬ್ ನಿಷೇಧ ವಾಪಾಸ್ ಹೇಳಿದೀನಿ ಎಂದ ಸಿಎಂ ಸಿದ್ದರಾಮಯ್ಯ :
ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.