ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಕನಸಿನ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಯೂ ಒಂದಾಗಿದೆ. ರಾಜ್ಯದಲ್ಲಿ 188 ಇಂದಿರಾ ಕ್ಯಾಂಟೀನ್ (Indira Canteens) ಓಪನ್ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಸುರೇಶ್ ಮಾತನಾಡಿದ ಅವರು , ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ. ಇಂದಿರಾ ಕ್ಯಾಂಟೀನ್ಗಾಗಿ ಇಲಾಖೆಗೆ 240 ಕೋಟಿ ರೂ. ಹಣ ನೀಡಿದ್ದಾರೆ.
ಬೆಳಗಾವಿಯಲ್ಲೂ ಕೂಡ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು. ಹೊಸದಾಗಿ ಇಂದಿರಾ ಕ್ಯಾಂಟೀನ್ಗಳ ಪುನಶ್ಚೇತನ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಬೇಕಂತಲೇ ಇಂದಿರಾ ಕ್ಯಾಂಟೀನ್ನಲ್ಲಿ ಊಟ ಕೊಡದೆ ನಿರ್ವಹಣೆ ಮಾಡದೆ ಹಾಳು ಮಾಡಿದ್ದರು.
ಜನರಿಗೆ ಯಾವ ಊಟ ಇಷ್ಟ ಆಗುತ್ತೆ ಅದನ್ನ ಕೊಡುವುದು ನಮ್ಮ ಉದ್ದೇಶವಾಗಿದೆ. ಈಗಾಗಲೇ ದರ 5 ರೂ ಹೆಚ್ಚಿಗೆ ಮಾಡಿದ್ದು ಅದನ್ನ ಸರ್ಕಾರ ಭರಿಸುತ್ತದೆ. ಜನರಿಗೆ ಹೆಚ್ಚಿಗೆ ಒಂದು ರೂಪಾಯಿ ಕೊಡಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.