ಬೆಂಗಳೂರು : ಡಿಸೆಂಬರ್ 5ರವರೆಗೆ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವರುಣಾಬ್ಬರದ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಮುನ್ನೆಚ್ಚರಿಕೆ ನೀಡಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ಮಂಜು ಮುಸುಕಿದ ವಾತಾವರಣವಿದ್ದು, ಸಂಜೆ ವೇಳೆ ಮಳೆ ಬರುವ ಎಲ್ಲಾ ಸಾಧ್ಯತೆಗಳಿವೆ.