ಬೆಂಗಳೂರು : ನಟ ಯಶ್ ಹುಟ್ಟುಹಬ್ಬ ನಿಮಿತ್ತ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಅಭಿಮಾನಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ .
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್ಡೇ ನಿಮಿತ್ತ ಬೃಹತ್ ಬ್ಯಾನರ್ ವೊಂದನ್ನು ನಿಲ್ಲಿಸೋದಕ್ಕೆ ಮುಂದಾಗಿದ್ದಾರೆ ಆ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ದುರ್ದೈವಿಗಳು.
ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.