Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಇಂದು ಅಂಗನವಾಡಿ ಕಾರ್ಯಕರ್ತೆಯರ ಅನಿರ್ದಿಷ್ಟವಧಿ ಪ್ರತಿಭಟನೆ

ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕ್‌ ಬಳಿ ವಿವಿಧ ಬೇಡಿಕೆ ಇಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಅನಿರ್ದಿಷ್ಟವಧಿ ಪ್ರತಿಭಟನೆ ಮುಂದಾಗಿದ್ದಾರೆ.

ಬೆಳಗ್ಗೆ 11 ಗಂಟೆಗೆ ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿನೂರಾಕ್ಕು ಹೆಚ್ಚು ಅಂಗನವಾಡಿ ಕಾರ್ಯಕರ್ತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ 430, ಸಹಾಯಕಿಯರ ಹುದ್ದೆ 1198 ಖಾಲಿ ಇವೆ. ಬೆಂಗಳೂರು ನಗರದಲ್ಲಿ ಒಟ್ಟು 2877 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 3-4 ವರ್ಷದಿಂದ ನೌಕರರನ್ನ ನೇಮಕ ಮಾಡಿಲ್ಲ. ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ 8 ತಿಂಗಳುಕಳೆದ್ರು ಇಲಾಖೆಯ ಕಡೆಯಿಂದ ಯಾವಯದೇ ಉತ್ತರ ಬಂದಿಲ್ಲ. ಈ ನಿಟ್ಟಿನಲ್ಲಿ ಹಲವಾರು ಬೇಡಿಕೆ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸೋದಕ್ಕೆ ಮುಂದಾಗಿದ್ದಾರೆ.

ಬಹುತೇಕ‌ ಅಂಗನವಾಡಿಗಳಲ್ಲಿ ಸಹಾಯಕರಿಯರೇ ಇಲ್ಲ. ಸಹಾಯಕಿಯರಿಲ್ಲದೇ ಕಾರ್ಯಕರ್ತೆಯರು ಪರದಾಡುವಂತಾಗಿದೆ. ಹುದ್ದೆ ಭರ್ತಿಗೆ 5-3-2023 ಪ್ರಕಟಣೆ ಹೊರಡಿಸಿ ಅರ್ಜಿಯನ್ನ ಸ್ವಿಕರಿಸಲಾಗಿದೆ. ಅರ್ಜಿ ಸ್ವೀಕರಿಸಿದ್ದು ಬಿಟ್ಟರೆ ಉಳಿದಂತೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಸಹಾಯಕಿಯರಿಲ್ಲದೇ ಕಾರ್ಯಕರ್ತೆಯರು ಪರದಾಡುವಂತಾಗಿದೆ ಎಂದು ತಮ್ಮ ಅಳಲನ್ನು ಇಂದು ನಡೆಯುವ ಪ್ರತಿಭಟನೆಯಲ್ಲಿ ತೋಡಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!