ಬೆಂಗಳೂರು: ಇಂದು ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ.
ಮೈಸೂರು ಮೂಲದ ಪರಶುರಾಮ್ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ. ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ.