ಬೆಂಗಳೂರು: ಕಾಂಗ್ರಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿನೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಂದ ನಂತ್ರ, ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.