Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ಹೇಳಿಕೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಸಹ ಮುಂಬೈ ಪ್ರಾಂತ್ಯದಲ್ಲಿತ್ತು, ಹಿಂದಿನಿಂದಲೂ ಕನ್ನಡಿಗರು – ಮರಾಠಿ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿದ್ದೇವೆ. ಈ ಅನ್ಯೋನ್ಯತೆ ಮುಂದುವರಿಯಬೇಕು ಎನ್ನುವ ಆಶಯವನ್ನು ನಾನು ವ್ಯಕ್ತಪಡಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಗೆ ಸ್ಪಷ್ಟ ನೀಡಿದ್ದಾರೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದ ಹೇಳಿಕೆ ಸಾಕಷ್ಟು ಚರ್ಚೆ ಗ್ರಾಸವಾಗಿತ್ತು. ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನಲೆ ತಮ್ಮ ಹೇಳಿಕೆ ಸ್ಪಷ್ಟನೆ ನೀಡಿರುವ ಅವರು ನಾನು ಕಾರದಗಾದ ಕನ್ನಡ ಸಮಾವೇಶದಲ್ಲಿ ಆಡಿದ ಮಾತುಗಳಿಗೆ ಸ್ಪಷ್ಟನೆ ನೀಡಬಯಸುತ್ತೇನೆ.

ನಾನು ಹೆಮ್ಮೆಯ ಕನ್ನಡತಿಯಾಗಿ, ಕನ್ನಡದ ಮೇಲೆ ವಿಶೇಷವಾದ ಅಭಿಮಾನ ಇಟ್ಟುಕೊಂಡು ಗಡಿ ಭಾಗದಲ್ಲಿ ಇಷ್ಚೊಂದು ಉತ್ಸಾಹದಿಂದ ಅಲ್ಲಿನ ಕನ್ನಡಿಗರು – ಮರಾಠಿ ಭಾಷಿಕರೆಲ್ಲ ಸೇರಿ ಕನ್ನಡ ಸಮಾವೇಶ ನಡೆಸುತ್ತಿರುವುದನ್ನು ತಿಳಿದು, ಅವರ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮತ್ತು ಅವರಲ್ಲಿ ಉತ್ಸಾಹ ತುಂಬುವ ಉದ್ದೇಶದಿಂದ ಅಲ್ಲಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದೇನೆ.

ಕನ್ನಡಿಗರಿಗೆ ಸ್ಫೂರ್ತಿ ತುಂಬುವ ಭರದಲ್ಲಿ ಅಲ್ಲಿ ನಾನು ಆಡಿದ ಮಾತುಗಳ ಸಕಾರಾತ್ಮಕತೆಯನ್ನು ಅರ್ಥೈಸಿಕೊಳ್ಳಬೇಕೆಂದು ಮಾಧ್ಯಮದ ಸ್ನೇಹಿತರಲ್ಲಿ ವಿನಂತಿಸುತ್ತೇನೆ. ಇದರ ಬದಲಾಗಿ ಬೇರೆ ರೀತಿಯಲ್ಲಿ ಅರ್ಥೈಸುವುದರಿಂದ ಅದು ಗಡಿಭಾಗದ ಕನ್ನಡಿಗರ ಉತ್ಸಾಹಕ್ಕೆ ಹಿನ್ನಡೆಯನ್ನುಂಟು ಮಾಡಬಹುದು. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಸಹ ಮುಂಬೈ ಪ್ರಾಂತ್ಯದಲ್ಲಿತ್ತು, ಹಿಂದಿನಿಂದಲೂ ಕನ್ನಡಿಗರು – ಮರಾಠಿ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿದ್ದೇವೆ. ಈ ಅನ್ಯೋನ್ಯತೆ ಮುಂದುವರಿಯಬೇಕು ಎನ್ನುವ ಆಶಯವನ್ನು ನಾನು ವ್ಯಕ್ತಪಡಿಸಿದ್ದೇನೆ.

ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರ ರಾಜ್ಯವೇ ಅಸ್ಥಿತ್ವದಲ್ಲೇ ಇಲ್ಲದ್ದರಿಂದ ಅಂತಹ ಅರ್ಥ ಕಲ್ಪಿಸುವ ಪ್ರಶ್ನೆಯೇ ಬರುವುದಿಲ್ಲ. ಕಾರದಗಾ ಕನ್ನಡ ಸಮಾವೇಶಕ್ಕೆ ಮುಂದಿನ ವರ್ಷದಿಂದ ರಾಜ್ಯ ಸರಕಾರದ ಆರ್ಥಿಕ ಸಹಾಯ ಒದಗಿಸುವ ಮತ್ತು ಅಲ್ಲಿನ ಸಂಘಟನೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡಿಸಲು ಪ್ರಯತ್ನಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡುವ ಮೂಲಕ ಅವರ ಉತ್ಸಾಹವನ್ನು ಹೆಚ್ಚಿಸಿದ್ದೇನೆ. ಅವರ ಉತ್ಸಾಹವನ್ನು ನಾವು, ನೀವೆಲ್ಲ ಸೇರಿ ಇನ್ನಷ್ಟು ಹೆಚ್ಚಿಸೋಣ, ಬರುವ ವರ್ಷಗಳಲ್ಲಿ ಈ ಸಮಾವೇಶ ಇನ್ನಷ್ಟು ಅದ್ಧೂರಿಯಾಗಿ ನಡೆಯುವಂತೆ ಮಾಡೋಣ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ವರದಿ : ಬಸವರಾಜ ಹೂಗಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!