ಬೆಳಗಾವಿ : ಚಳಿಗಾಲದ ಅಧಿವೇಶನ 2ನೇ ದಿನವೂ ಪ್ರತಿಭಟನೆ ಕಾವು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಉತ್ತರ ಕರ್ನಾಟಕ ಭಾಗದ ನೀರಾವರಿ, ಕೃಷಿ, ಶಿಕ್ಷಣ, ಆರೋಗ್ಯ, ಆಡಳಿತ, ಉದ್ಯಮ ವಿಷಯಗಳ ಕುರಿತು ಚರ್ಚೆ ಆಗಬೇಕು. ಬೆಳಗಾವಿಯನ್ನ ಎರಡನೇ ರಾಜಧಾನಿ ಎಂದು ಘೋಷಿಸಬೇಕು. ಆಡಳಿತಾತ್ಮಕ ಅನುಕೂಲಕ್ಕಾಗಿ ಕಛೇರಿಗಳನ್ನು ಸ್ಥಳಾಂತರಿಸಬೇಕು.
ಕಿತ್ತೂರು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಬೇಕು. ಉತ್ತರ ಕರ್ನಾಟಕ ಜನಪ್ರತಿನಿಧಿಗಳಿಗೆ ಸಮಾನ ರಾಜಕೀಯ ಪ್ರಾತಿನಿಧ್ಯ ಸಿಗಬೇಕು. ಇಲ್ಲದಿದ್ದರೆ ಅನಿರ್ಧಿಷ್ಠ ಧರಣಿ ನಡೆಸುತ್ತೇವೆ ಎಂದು ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಅನೇಕ ಹೋರಾಟಗಾರರು ಸೇರಿದಂತೆ ಮಠಾಧೀಶರುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.