ಬೆಂಗಳೂರು : ನಗರದ ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ. ಅಪಘಾತದಿಂದ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ಮೃತಪಟ್ಟಿದ್ದಾನೆ.
ನಿನ್ನೆ ಮುಂಜಾನೆ 9.30ಕ್ಕೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್ ಸವಾರ ತೆರಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದು ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ.