ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣದ ದೂರನ್ನು ಪರಿಶೀಲನೆ ನಡೆಸುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ನ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ನೀಡಿದೆ.
ಇದನ್ನು ಓದಿ :- ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ- ಪ್ರತೀ ಡಾಲರ್ ಗೆ 81.18ರೂ