ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ 20 ಸೀಟು ಗೆಲ್ಲಬೇಕೆಂದು ಕಾಂಗ್ರೆಸ್ ಪಣತೊಟ್ಟ ಬೆನ್ನಲ್ಲೆ ರಾಜ್ಯ ರಾಜಕಾರಣದಲ್ಲಿ ಅಪರೇಷನ್ ಕಮಲ ಶುರುವಾಗಿದೆ. ಅದರಲ್ಲೂ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಲ ಹಲವು ದಿನಗಳಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೂಲಕ ಮಾಜಿ ಶಾಸಕ ಚಿಕ್ಕನಗೌಡರ್ (Ex MLA Chikkanagoudar) ಅವರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಇದೀಗ ಶೆಟ್ಟರ್ ಮಾತುಕತೆ ಫಲಪ್ರದದಿಂದಾಗಿ ಚಿಕ್ಕನಗೌಡರ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೆ ತೀರ್ಮಾನಿಸಿದ್ದಾರೆ. ಈಗಾಗಲೇ ಜಗದೀಶ್ ಶೆಟ್ಟರ್ ಅವರು ಚಿಕ್ಕನಗೌಡರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ಜು ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದು, ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯೊಂದೇ ಬಾಕಿ ಉಳಿದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಸೋಲುಕಂಡಿದ್ದರು. ಇದೀಗ ಅವರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ