ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳಿನಾಡಿಗೆ 15 ದಿನಗಳವರೆಗೆ ನೀರು ಹರಿಸಲು ಆದೇಶಿಸಿದ ಹಿನ್ನೆಲೆ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಇಂದು ಮಧ್ಯಾಹ್ನ 12ಗಂಟೆಗೆ ವಾಟಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದಿಂದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಆಕ್ರೊಶ ವ್ಯಕ್ತಪಡಿಸಲಿದ್ದಾರೆ. ಪ್ರತಿಭಟನೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಮಾಣ ಖಂಡನೀಯ. ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ವಜಾ ಮಾಡಿ. ಕಾವೇರಿ ನಿಯಂತ್ರಣ ಸಮಿತಿ ಬೇಡವೇ ಬೇಡ. ಕಾವೇರಿ ನೀರು ನಿಯಂತ್ರಣ ಸಮಿತಿಯ ವಿರುದ್ಧ ಆಗ್ರಹಿಸಲಿದ್ದಾರೆ