Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

ಚೆಕ್ ಬೌನ್ಸ್ ಕೇಸ್ : ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಒತ್ತಾಯ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣಕ್ಕೆ ಸಚಿವ ವಿರುದ್ದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರತ್ಯಗೆ ತಗಲಿದ ಕಪ್ಪು ಚುಕ್ಕೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜೀನಾಮೆ ನೀಡಿ ನೈತಿಕತೆ ಪ್ರದರ್ಶಿಸಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಒತ್ತಾಯಿಸುತ್ತೇನೆ ಭಂಡತನ ಅಂಟಿಸಿಕೊಂಡಿರುವ ಈ ಸರ್ಕಾರ ಈ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಶಿಕ್ಷಣ ಮೌಲ್ಯಕ್ಕೆ ಅಪಚಾರ ಎಸಗಿದಂತಾಗುತ್ತದೆ ಎಂದು ಟ್ವೀಟ್ ಮೂಲಕ ಸಚಿವರ ವಿರುದ್ದ ಕ್ರಮಕ್ಕೆ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!