ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಘೋಷಣೆಯಂತೆ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದೆ. ರಾಜ್ಯದಾದ್ಯಂತ ಶಕ್ತಿ ಯೋಜನೆ ಜಾರಿ ತಂದಿರುವ ರಾಜ್ಯ ಸರ್ಕಾರ, ರಾಜ್ಯದ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದೆ. ಇದ್ರ ಉಪಯೋಗವನ್ನು ಮಹಿಳೆಯರು ಕೂಡ ಪಡೆದುಕೊಳ್ಳುತ್ತಿದ್ದಾರೆ. ಆದ್ರೆ ಅಲ್ಲಲ್ಲಿ ಮಹಿಳೆಯೊಂದಿಗೆ ಚಾಲಕರು, ನಿರ್ವಾಹಕರು ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಕುರಿತು ಸುತ್ತೊಲೆಯನ್ನು ಹೊರಡಿಸಿರುವ ನಿಗಮ, ಮಹಿಳೆಯರೊಂದಿಗೆ ಅಗೌರವಾಗಿ ನಡೆದುಕೊಳ್ಳುವ ಪ್ರಕರಣಗಳು ವರದಿಯಾದ್ದಲ್ಲಿ ಸಂಬಂಧಪಟ್ಟ ಚಾಲಕ, ನಿರ್ವಾಹಕರ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದೆ.
0 46 Less than a minute