ವೈದ್ಯರ ನಿರ್ಲಕ್ಷ್ಯದಿಂದ ಮೂರು ತಿಂಗಳ ಮಗು ಸಾವನಪ್ಪಿರುವಂತ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸೋಮನಹಳ್ಳಿ ಮೂಲದ ಮಧು ಮತ್ತು ಶೃತಿ ದಂಪತಿಗೆ ಸೇರಿದ್ದ ಮಗು, ಚುಚ್ಚು ಮದ್ದು ಪಡೆದು ಮನೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗು ಸಾವನಪ್ಪಿದೆ. ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನಪ್ಪಿದೆ ಎಂದು ಪೋಷಕರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
0 5 Less than a minute