ಬೆಂಗಳೂರು : ಬಿಜೆಪಿ ಜೊತೆಗಿನ ಮೈತ್ರಿಯಿಂದ ಮುನಿಸಿಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಪಕ್ಷದ ಕೋರ್ ಕಮಿಟಿ ಸಭೆ ಕರೆದಿದ್ದರು. ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿದ್ದ ಸಿಎಂ ಇಬ್ರಾಹಿಂ ಸ್ಥಾನಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಯ್ಕೆ ಮಾಡಲಾಗಿದೆ.