ಬೆಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಉಲ್ಟಾ ಹೊಡೆದಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಅಂತ ನಾನು ಕಾರ್ಯಕ್ರಮದಲ್ಲಿ ಹೇಳಿದ್ದೇನೆ. ಯಾವ ಶೈಕ್ಷಣಿಕ ವರ್ಷದಿಂದ ಜಾರಿ ಅಂತ ಸರ್ಕಾರದ ಹಂತದಲ್ಲಿ ಚರ್ಚೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.