Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಅಸ್ವಸ್ಥ : ಇಂದಿನ ಬಹುತೇಕ ಕಾರ್ಯಕ್ರಮಗಳು ರದ್ದು

ಬೆಂಗಳೂರು : ನಿನ್ನೆ ಬಜೆಟ್ (Budget) ಮಂಡಿಸಿದ ಸಿಎಂ ಸಿದ್ದರಾಮಯ್ಯ(CM Siddaramaiah) ಇಂದು ತೀವ್ರ ಅಸ್ವಸ್ಥಗೊಂಡಿದ್ದು, ವಿಪರೀತ ಕೆಮ್ಮಿನಿಂದ ಬಳಲುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ವಿಪರೀತ ಕೆಮ್ಮು ಕಾಣಿಸಿಕೊಂಡಿದ್ದು, ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಿಎಂ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಬದಲಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರಯ ಶೀತ ಮತ್ತು ಗಂಟಲು ಆರೋಗ್ಯ ಸಮಸ್ಯೆ ಹಿನ್ನೆಲೆ ಇಂದಿನ ಬಹುತೇಕ ಕಾರ್ಯಕ್ರಮ ರದ್ದು ಮಾಡಲಾಗಿದೆ. ಸಿಎಂ ಭೇಟಿ ಮಾಡಲು ಬಂದಿದ್ದ ಅಧಿಕಾರಿಗಳಾದ ಸರ್ಕಾರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಅಲೋಕ್ ಮೋಹನ್, ಇಂಟಲಿಜೆನ್ಸ್ ಎಡಿಜಿಪಿ ಶರತ್ ಚಂದ್ರ ವಾಪಸ್ ಆಗಿದ್ದಾರೆ. ಇನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಾದ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್, ಸುಂದರ್ ರಾಜ್ ಸೇರಿದಂತೆ ಹಲವರು ವಾಪಸ್ ತೆರಳಿದ್ದಾರೆ ಎಂದು ವರದಿಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!