ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.
ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಅಂದರೆ ಆಧಾರ್ ಅಥವಾ ಪಡಿತರ ಕಾರ್ಡ್ ನೊಂದಿಗೆ ಬಂದು ರಿಜಿಸ್ಟರ್ ಮಾಡಿಕೊಳ್ಳಬೇಕು. ರಿಜಿಸ್ಟರ್ ಮಾಡಿಕೊಳ್ಳುವಾಗ ಯಾವ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಎಂದು ನೋಡಿ ಆ ಇಲಾಖೆಯ ಕೌಂಟರ್ ನಂಬರ್ ಕೊಡಲಾಗುತ್ತೆ.
ಆ ಕೌಂಟರ್ ನಂಬರ್ ಬಳಿ ಹೋಗಿ ತಮ್ಮ ಮನವಿಯನ್ನ ಸಾರ್ವಜನಿಕರು ಕೊಡಬಹುದು. ಇದಕ್ಕಾಗಿ 36 ವಿವಿಧ ಇಲಾಖೆಯ ಕೌಂಟರ್ ಗಳನ್ನ ತೆರೆಯಲಾಗಿದೆ. ಕೌಂಟರ್ ಗಳಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೇ ಖುದ್ದು ಸಾರ್ವಜನಿಕ ಮನವಿ ಸ್ವೀಕರಿಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯನವರೇ ಖುದ್ದು ಆ ಕೌಂಟರ್ ಗಳಿಗೆ ತೆರಳಿ ಅರ್ಜಿಯನ್ನ ನೋಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇರುಲು ಸೂಚಿಸಲಾಗಿದೆ.
ಇನ್ನೂ ಆನ್ ಲೈನ್ ನಲ್ಲೂ ನೊಂದಣಿ ಮಾಡಿಕೊಳ್ಳಬಹುದು. ಸಿಎಂ ಜನಸ್ಪಂದನಕ್ಕೆ ಅಹವಾಲು ಸಲ್ಲಿಸಲು 1902 ಸಂಖ್ಯೆ ಗೆ ಕರೆ ಮಾಡಿ ನೊಂದಾಯಿಸಬಹುದು. ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಲಘು ಉಪಾಹಾರ ಮತ್ತು ನೀರನ ವ್ಯವಸ್ಥೆ ಕಲ್ಪಿಸಲಾಗುತ್ತೆ. ಜನಸ್ಪಂದನಕ್ಕೆ ಆಗಮಿಸುವ ಸಾರ್ವಜನಿಕರಿಗೆ ತಾವು ಇರುವಲ್ಲೇ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗುತ್ತೆ.
ಜನಸ್ಪಂದನಕ್ಕೆ ಬರುವ ಸಾರ್ವಜನಿಕರಿಗೆ ಮೆಜೆಸ್ಟಿಕ್ ನಿಂದ ಹಾಗೂ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ವಿಧಾನಸೌಧಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹಿರಿಯ ನಾಗರೀಕರು ಹಾಗೂ ವಿಕಲ ಚೇತರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.
ಕಳೆದ ಬಾರಿ ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ 4,030 ಅರ್ಜಿಗಳ ಬಂದಿದ್ದವು. ಆ ಪೈಕಿ 3,738 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಸಿಎಂ ಜನಸ್ಪಂದನ ಕಾರ್ಯಕ್ರಮ ಚಾಲನೆ ವೇಳೆ ಕಳೆದ ಬಾರಿ ಜನಸ್ಪಂದನದ ಅಂಕಿ ಅಂಶಗಳನ್ನ ವಿವರಣೆ ನೀಡುವ ಸಾಧ್ಯತೆ ಇದೆ, ಈ ಬಾರಿ ಇನ್ನೂ ಹೆಚ್ಚು ಅರ್ಜಿಗಳು ಬರುವ ನಿರೀಕ್ಷೆ ಇದೆ.