ಬೆಂಗಳೂರು : ಇಂದು ರಾಯಚೂರು, ಬಾಗಲಕೋಟೆ ಜಿಲ್ಲಾ ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ಅವರು ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ .
ಬೆಳಗ್ಗೆ 10 ಗಂಟೆಗೆ ಹೆಚ್ಎಎಲ್ನಿಂದ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಬಳ್ಳಾರಿಗೆ ಪ್ರಯಾಣಿಸಿ, ಬಳ್ಳಾರಿಯಿಂದ ಹೆಲಿಕಾಪ್ಟರ್ ಮೂಲಕ ದೇವದುರ್ಗದ ಮೀರಾಕೋಟೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. 12 ಗಂಟೆಗೆ ಹಾಲುಮತ ಸಂಸ್ಕೃತಿ ವೈಭವ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ನಂತರ ರಾಯಚೂರಿನ ಜಿಲ್ಲಾ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆ ಕೂಡಲಸಂಗಮಕ್ಕೆ ಪ್ರಯಾಣಿಸಲಿದ್ದಾರೆ. 3.30ಕ್ಕೆ ಬಸವ ಶರಣ ಮೇಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿಯಾಗಲಿದ್ದಾರೆ.
ನಂತರ ಕೂಡಲಸಂಗಮದಿಂದ ಹೆಲಿಕಾಪ್ಟರ್ ಬಳ್ಳಾರಿಗೆ ತೆರಳಲಿದ್ದಾರೆ. ಸಂಜೆ 4.50ಕ್ಕೆ ಬಳ್ಳಾರಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. 5.50ಕ್ಕೆ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ವಾಪಸ್ಸಾಗಲಿದ್ದಾರೆ.