ಬೆಂಗಳೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಆರ್. ಅಶೋಕ ಎಕ್ಸ್ ಸಂದೇಶ ರವಾನಿಸುವ ಮೂಲಕ ಕಿಡಿಕಾರಿದ್ದಾರೆ..
‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ’ ಕಿಡಿ ಕಾರಿದ್ದಾರೆ.