Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಬೆಂಗಳೂರಿನಾದ್ಯಂತ ಚುರುಗುಟ್ಟುತ್ತಿದೆ ʻಚಳಿʼ : ವರುಣನ ಆಗಮನ ಸಾಧ್ಯತೆ

ಬೆಂಗಳೂರು : ಹೊಸ ವರ್ಷದ ಹೊಸತನ ಹುರುಪಿನಲ್ಲಿರೋ ಮಂದಿಗೆ ತಂಪೆನಿಸುವ ಚಳಿ ಮುದ ನೀಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೈ ನಡುಗಿಸುವ ಚಳಿಚುರುಗುಟ್ಟುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ ಏರಿಯಾಗಳಲ್ಲೂ ಚುಮುಚುಮು ಚಳಿ ಹೆಚ್ಚಾಗಿದ್ದು, ಚಳಿಯಲ್ಲೂ ಸಿಟಿ ಜನರು ಮುಂಜಾನೆಯೇ ಎದ್ದು ಮೈ ತುಂಬ ಬೆಚ್ಚಗಿನ ಬಟ್ಟೆಗಳನ್ನು ತೊಟ್ಟುಗೊಂಡು ತಮ್ಮ ತಮ್ಮ ಕೆಲಸ ಕಾರ್ಯಗಳತ್ತ ಪಯಣ ಬೆಳೆಸಿದ್ದಾರೆ.

ಜನವರಿ 4 ರಿಂದ 7ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!