ಬೆಂಗಳೂರು : ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಶುರುವಾಗಿದೆ ಎಂದು ವಿಧಾನಸೌಧದ ಕೊಠಡಿಯಲ್ಲಿ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದ ಕೊಠಡಿಯಲ್ಲಿ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಕಗ್ಗೊಲೆ ಆಗಿದ್ದವು.
ರಾಮಮಂದಿರ ನಿರ್ಮಾಣ ಚರಿತ್ರೆಯಲ್ಲಿ ದಾಖಲಾಗುವ ಐತಿಹಾಸಿಕ ಕ್ಷಣ. ನಾವು ಕರಸೇವೆ ಮಾಡಿದ್ದೇವೆ. ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಕರಸೇವಕರನ್ನು ಭಯಭೀತಗೊಳಿಸಲು ಹೊರಟಿದೆ. 30 ವರ್ಷಗಳ ಬಳಿಕ ಹುಬ್ಬಳ್ಳಿಯಲ್ಲಿ ಕಾರ್ಯಕರ್ತರನ್ನು ಜೈಲಿಗಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ರಾಮಭಕ್ತರ ಮೇಲೆ ಕಾಂಗ್ರೆಸ್ ಸರ್ಕಾರ ಕೇಸ್ ಹಾಕಿದೆ ಎಂದರು.
ದ್ವೇಷದ ರಾಜಕಾರಣಕ್ಕೆ ಸರ್ಕಾರ ಮುಂದೆ ಪ್ರತಿಫಲ ಅನುಭವಿಸುತ್ತದೆ. ರಾಮಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ್ದೆ, ನನ್ನನ್ನು ಬಂಧಿಸುತ್ತೀರಾ? ಯಡಿಯೂರಪ್ಪ ಕೂಡ ರಾಮಜನ್ಮಭೂಮಿ ಹೋರಾಟಕ್ಕೆ ಹೋಗಿದ್ದರು. ರಾಮಭಕ್ತರ ಬಂಧನ ಸರ್ಕಾರದ ಟಿಪ್ಪು ಸಂಸ್ಕೃತಿಯನ್ನು ತೋರಿಸುತ್ತದೆ.
30 ವರ್ಷಗಳ ಹಿಂದಿನ ಪ್ರಕರಣವನ್ನು ಈಗ ಮತ್ತೆ ಓಪನ್ ಮಾಡಿದ್ದಾರೆ. ಆ ಕೇಸ್ಗೆ ಮರುಜೀವ ನೀಡಿ ಎಂದು ಸರ್ಕಾರ ಸೂಚನೆ ನೀಡಿದೆಯಂತೆ. ಟಿಪ್ಪು ಸಂಸ್ಕೃತಿಯ ಆಡಳಿತ ಮರು ಸ್ಥಾಪನೆಗೆ ಸರ್ಕಾರ ಹೊರಟಿದೆ ಎಂದರು.