ಬೆಂಗಳೂರು : ರಾಮಮಂದಿರ ಉದ್ಘಾಟನೆಯಾಗುವ ಸಂತೋಷದ ಸುಸಂದರ್ಭದಲ್ಲಿ ರಾಜ್ಯದಲ್ಲಿ ಗಲಭೆ ಸೃಷ್ಠಿಗೆ ಕಾಂಗ್ರೆಸ್ ಕಾರಣವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ
ದಾವಣಗೆರೆಯ ಜಿಎಂಐಟಿ ಗೆಸ್ಟ್ ಹೌಸ್ಗೆ ಭೇಟಿಕೊಟ್ಟಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಇಡೀ ದೇಶ ರಾಮ ಭಕ್ತರು ಸಂತೋಷದಿಂದ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಠಿಗೆ ಕಾಂಗ್ರೆಸ್ ಕಾರಣವಾಗುತ್ತಿದೆ ಕಾಂಗ್ರೆಸ್ ಲೋಕಸಭೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿದೆ. ಎಲ್ಲಾ ಸರ್ವೆಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎಂದು ತಿಳಿದು ಬಂದಿದೆ. ಅದೇ ಕಾರಣಕ್ಕೆ ಕಾಂಗ್ರೆಸ್ ಈ ರೀತಿ ನಡೆದುಕೊಳ್ಳುತ್ತಿದೆ ಎಂದಿದ್ದಾರೆ.