ಅದಾನಿ (ADHANI) ಕಂಪನಿಗಳ ಬಗ್ಗೆ ಹಿಂಡೆನ್ಬರ್ಗ್ ನೀಡಿದ ವರದಿ ಆಧರಿಸಿ ಸಂಸತ್ತಿನ ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶದ್ಯಾಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳ ಮನವಿ ಮಾಡಿದ್ದು, ಅವಕಾಶ ಸಿಗದ ಹಿನ್ನೆಲೆಯಲ್ಲಿ ದೇಶದ್ಯಾಂತ ಎಸ್ಬಿಐ ಮತ್ತು ಎಲ್ಐಸಿ ಕಚೇರಿಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ (CONGRESS) ಕರೆ ನೀಡಿತ್ತು.
ಜಮ್ಮು ಕಾಶ್ಮೀರ (Jammu Kashmir), ದೆಹಲಿ ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ (Congress) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಚೆನ್ನೈನ ಜಿ.ಪಿ ರಸ್ತೆಯಲ್ಲಿರುವ ಎಲ್ಐಸಿ ದಕ್ಷಿಣ ವಲಯ ಕಚೇರಿಯ ಮುಂದೆ, ಮುಂಬೈನ ಎಸ್ಬಿಐ ಬ್ಯಾಂಕ್ ಮುಂಭಾಗದಲ್ಲಿ ಪ್ರತಿಭಟನೆಗಳು ನಡೆದಿವೆ. ಕರ್ನಾಟಕದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಅದಾನಿ ದೊಡ್ಡ ಮಟ್ಟದ ಅಕ್ರಮ ನಡೆಸಿದ್ದಾರೆ.
ಎಸ್ಬಿಐ ಮತ್ತು ಎಲ್ಐಸಿಯಂತಹ ಸಾರ್ವಜನಿಕ ಸಂಸ್ಥೆಗಳು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದು, ಜನರು ದೊಡ್ಡ ನಷ್ಟ ಅನುಭವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯಬೇಕು ಎಂದು ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ –ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅದಾನಿ ವಿರೋಧಿ ಘೋಷಣೆ- ಉಭಯ ಸದನಗಳು ಮುಂದೂಡಿಕೆ