Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

ಬಿಜೆಪಿಯ ಡೋಂಗಿ ರಾಜಕಾರಣವನ್ನ ಕಾಂಗ್ರೆಸ್​ ಬಯಲು ಮಾಡಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯ ಡೋಂಗಿ ರಾಜಕಾರಣವನ್ನು ಕಾಂಗ್ರೆಸ್​ ಬಯಲು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷ ಉದಯವಾಗಿ 138 ವರ್ಷ ಪೂರ್ಣಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲೇ‌ ಕಾಂಗ್ರೆಸ್ ಸ್ಥಾಪನೆಯಾಯಿತು. ದೇಶದ ಜನರ ಜೀವನ‌ ಸುಧಾರಣೆಗಾಗಿ ಉದಯವಾದ ಪಕ್ಷ ಕಾಂಗ್ರೆಸ್. ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ರು. ಇದಕ್ಕೆ ಕಾಂಗ್ರೆಸ್ ಪಕ್ಷ ಕಾರಣ, ಬೇರೆ ಯಾವುದೇ ಪಕ್ಷ ಕಾರಣವಲ್ಲ. ಬಿಜೆಪಿಯ ಒಬ್ಬರಾದ್ರೂ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರಾ? ಬಿಜೆಪಿಗರು ದೇಶ ಭಕ್ತರು ಅಂತಾರೆ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ರಾ? ಇದನ್ನು ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯ ಡೋಂಗಿ ರಾಜಕಾರಣವನ್ನು ಕಾಂಗ್ರೆಸ್​ ಬಯಲು ಮಾಡಬೇಕು. ಆಧುನಿಕ ಭಾರತದ ಅಭಿವೃದ್ಧಿಗೆ ಮೊದಲ ಪ್ರಧಾನಿ ನೆಹರು ಅಡಿಪಾಯ ಹಾಕಿದ್ದನ್ನು ಮರೆಯಬಾರದು ಎಂದು ಸಿದ್ದರಾಮಯ್ಯ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!