ಹುಬ್ಬಳ್ಳಿ: ಭ್ರಷ್ಟಾಚಾರ ರಹಿತ ಆಡಳಿತ ಕೊಡೋದು ಕಾಂಗ್ರೆಸ್ ಪಕ್ಷದ ಸಂಕಲ್ಪವಾಗಿದೆ, ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ನಾವು ಗೆದ್ದಿದೀವಿ ಅಂತಾ ಬೀಗಲ್ಲ, ವಿನಮ್ರತೆಯಿಂದ ನುಡಿದಂತೆ ನಡೆಯುತ್ತೇವೆ. ಭ್ರಷ್ಟಾಚಾರ ರಹಿತ ಆಡಳಿತ ಕೊಡೋದು ನಮ್ಮ ಪಕ್ಷದ ಸಂಕಲ್ಪವಾಗಿದೆ. ಅನ್ನಭಾಗ್ಯ ವಿಳಂಬವಾದರೆ ಅದಕ್ಕೆ ನೇರ ಹೊಣೆಯೇ ಕೇಂದ್ರ ಸರ್ಕಾರ . ದುಡ್ಡು ಕೊಟ್ಟರೂ ಅಕ್ಕಿ ಕೊಡದೇ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರದ ಬಳಿ ಅಕ್ಕಿ ಇದ್ದರೂ ಕೊಡಲು ತಾರತಮ್ಯ ಮಾಡುತ್ತಿದ್ದಾರೆ.
ಕಾಂಗ್ರೆಸ್ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಶಕ್ತಿ ಯೋಜನೆ ಈಗಾಗಲೇ ಜಾರಿಗೆ ತಂದಿದ್ದೇವೆ. ಆದ್ರೆ ಅನ್ನ ಯೋಜನೆಯಡಿ 10 ಕೆ.ಜಿ ಅಕ್ಕಿ ವಿತರಣೆಗಾಗಿ ರಾಜ್ಯಕ್ಕೆ ಅಕ್ಕಿ ತರಲು ಕೇಂದ್ರ ಮಂತ್ರಿಗಳು, ಎಮ್ಪಿಗಳು ಸಹಕರಿಸಬೇಕು. ಕೇಂದ್ರ ಸರ್ಕಾರ ಅಕ್ಕಿ ಕೊಡಲಿ ಬಿಡಲಿ, ನಾವು ಘೋಷಿಸಿದಂತೆ ರಾಜ್ಯದ ಜನರಿಗೆ ಅಕ್ಕಿ ಕೊಡುತ್ತೇವೆ. ಬಿಜೆಪಿ ಕೊಟ್ಟ ಮಾತು ಈಡೇರಿಸಿಲ್ಲ, ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದಾರೆ. ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ, ರಾಹುಲ್ ಗಾಂಧಿ ಪ್ರಧಾನಿಯಾಗೇ ಆಗ್ತಾರೆ ಎನ್ನುವ ಮೂಲಕ ಬಿಜೆಪಿ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ.