ಬೆಂಗಳೂರು : ಕರ್ನಾಟಕದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆ ನಡೆಯಬಹುದು ಎಂಬ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ
ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ . ಬಿಕೆ ಹರಿಪ್ರಸಾದ್ ಅವರಿಗೆ ಮಾಹಿತಿ ಇದ್ದರೆ ಗೃಹ ಇಲಾಖೆಗೆ ಕೊಡಲಿ. ದಾಖಲೆ ಕೊಡಿ, ನಮಗೂ ಕೊಡಿ ಮಾಧ್ಯಮಗಳಿಗೆ ಕೊಡಿ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಜಗದೀಶ್ ಶೆಟ್ಟರ್ ನಾನು ದುಡ್ಡು ಕೊಟ್ಟಿದ್ದೇನೆ ಅಂತಾ ಹೇಳಿದ್ದಾರೆ. ಶೆಟ್ಟರ್ಗಿಂತಲೂ ನಾನು ಹೆಚ್ಚು ಹಣ ಸಂಗ್ರಹ ಮಾಡಿಕೊಟ್ಟಿದ್ದೇನೆ ಎಂದಿದ್ದಾರೆ.