ಬೆಂಗಳೂರು: ರಾಜ್ಯದಲ್ಲಿ ಕೋವಿಡ್ (Covid Case ) ಪ್ರಕರಣಗಳು ಮತ್ತೆ ಹೆಚ್ಚುತ್ತಿದೆ. ಒಂದೇ ದಿನ 100 ಪಾಸಿಟಿವ್ ಕೇಸ್ ವರದಿಯಾಗಿದ್ದು, ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ ಎಂದು ಮಾಹಿತಿ ಬಂದಿದೆ.
ನಿನ್ನೆ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿರುವ ಮಾಹಿತಿ ಇದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 270 ಕ್ಕೆ ಏರಿಕೆ ಕಂಡು ಬಂದಿದೆ. ಕೊರೊನಾ ಪಾಸಿಟಿವಿಟಿ ದರ 5.90% ಇದೆ. ಸಿಲಿಕಾನ್ ಸಿಟಿಯಲ್ಲಿ ನಗರದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭಯ ಭೀತಿ ಶುರುವಾಗಿದೆ. ಇಂದು ಬೆಂಗಳೂರಿನಲ್ಲಿ 80 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿ ದೃಢಪಟ್ಟಿವೆ.