ಬೆಂಗಳೂರು :ದೇಶಾದ್ಯಂತ ಮಹಾಮಾರಿ ಕೊರೊನಾ ರಣಕೇಕೆ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೆ ಕೇರಳದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ಕೆಲವು ಭಾಗಗಳಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ರಾಜ್ಯದಲ್ಲಿ ನಿನ್ನೆ 92 ಪ್ರಕರಣಗಳ ಸಂಖ್ಯೆ ಇಂದು 115ಕ್ಕೆ ತಲುಪಿದೆ. ಒಂದೇ ದಿನದಲ್ಲಿ 23 ಕೇಸ್ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ನಗರದ ಎಲ್ಲಾ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ನಗರದ ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಸಿದ್ಧತೆ ಮಾಡಿಕೊಂಡಿದ್ದು, ಆಸ್ಪತ್ರೆಯ ಒಪಿಡಿ ಬ್ಲಾಕ್ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ನಿನ್ನೆ 200 ಜನರಿಗೆ ಟೆಸ್ಟ್ ಮಾಡಲಾಗಿದ್ದು, 10 ಜನರಿಗೆ ಪಾಸಿಟಿವ್ ಕಂಡುಬಂದಿತ್ತು. ಕೊವಿಡ್ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್ ನಿರ್ಮಾಣ ಮಾಡಲಾಗಿದೆ.
ಐಸಿಯುನಲ್ಲಿ 6 ಬೆಡ್ಗಳನ್ನು ಇರಿಸಲಾಗಿದೆ. ಚಿಕಿತ್ಸೆ ನೀಡಲು ನರ್ಸ್, ವೈದ್ಯರು, ಟೆಕ್ನಷಿಯನ್ಸ್ಗಳನ್ನು ಆಸ್ಪತ್ರೆ ಹೊಂದಿದೆ. ಆಸ್ಪತ್ರೆಯಲ್ಲಿ ಪಿಪಿಇ ಕಿಟ್, ಮಾಸ್ಕ್, ಆಕ್ಸಿಜನ್ ಸಿಲಿಂಡರ್, ಲಿಕ್ವಿಡ್ ಆಕ್ಸಿಜನ್ ಹಾಗೂ ಆಕ್ಸಿಜನ್ ಜನರೇಟರ್ಗಳನ್ನ ಪರಿಶೀಲಿಸಿ ಸಿದ್ಧಗೊಳಿಸಲಾಗಿದೆ.